ಮಂಗಳೂರು : ಮಾನವೀತೆಯ ದೃಷ್ಟಿಯಲ್ಲಿ ಜನತೆಯ ಸಂಕಷ್ಟ ಸಮಯದಲ್ಲಿ ಸ್ಪಂದಿಸುವ ಕೆಲಸವನ್ನು ಮಾಡುವುದು ಮಾನವ ಧರ್ಮ, ಕೊರೂನಾ ಸೊಂಕಿತರ ಸೇವೆಗೆ ಕಾಂಗ್ರೆಸ್ ಕಾರ್ಯಕರ್ತರು ಮೊದಲ ಆದ್ಯತೆ ನೀಡಬೇಕು ಎಂದು ಮಾಜಿ ಸಚಿವ ವಿನಯ ಕುಮಾರ್ ಸೂರಕೆ ಸುಡಿದರು.
ಅವರು ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಕೊರೂನಾ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಿಂದ ಬಳಲುತಿರುವ ಹೆಜಮಾಡಿ ಗ್ರಾಮದ ಬಡ ಕುಟುಂಬಗಳಿಗೆ ಸುಮಾರು 300 ಅಹಾರ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವ್ಯೆ ಸುಕುಮಾರ್ , ಮಾಜಿ.ಜಿ.ಪಂ. ಸದಸ್ಯ ರಾಲ್ಪಿ ಡಿ” ಕೋಸ್ತ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೂರಾಜ್ ಹೆಜಮಾಡಿ , ಗ್ರಾ.ಪಂ.ಸದಸ್ಯರಾದ ಮಹಮ್ಮದ್ ಕಬೀರ್ , ನಿರ್ಮಲ , *ಫರೀದಾ, ಮಾಜಿ ಗ್ರಾ.ಪಂ.ಅಧ್ಯಕ್ಷ ಸುಭಾಶ್ ಸಾಲ್ಯಾನ್ , ಕುಸುಮ ಸಾಲ್ಯಾನ್, ಲಿಡಿಯಾ ಪೂರ್ಟಾಡು , ಕಾಪು ಬ್ಲಾಕ್ ಕಾಂಗ್ರೆಸ್ ಎಸ್.ಸಿ.& ಎಸ್.ಟಿ ಸಮಿತಿ ಅಧ್ಯಕ್ಷ ಕೇಶವ ಸಾಲ್ಯಾನ್ , ಸಮಾಜ ಸೇವಕ ಹಾಜಿ ಶೇಕಬ್ಬ ಕೆ.ಎಸ್ , ಹೆಜಮಾಡಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಇಕ್ಬಾಲ್, ಹೆಜಮಾಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೀನಾ ವಿನುತಾ ಡಿ “ಸೋಜ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಅಜೀಜ್, ಮಹಮ್ಮದ್ ಶರೀಫ್ , ದಿನೇಶ್ ಸಾಲ್ಯಾನ್ ಉಪಸ್ಥಿತರಿದ್ದರು.
ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕರ್ಕೇರ ಸ್ವಾಗತಿಸಿ, ಕಾಂಗ್ರೆಸ್ ಮುಖಂಡ ಸುಧಾಕರ್ ಕೆ ನಿರೂಪಿಸಿ, ವಂದಿಸಿದರು.